ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ಬಿಡುಗಡೆ ಮಾಡಿದ್ದ ₹55 ಕೋಟಿ ದುರ್ಬಳಕೆ.!  

(ನ್ಯೂಸ್ ಕಡಬ)Newskadaba.com ಬೆಂಗಳೂರು ,ಏ.19 ರಾಜ್ಯ ಸಾರಿಗೆ ಇಲಾಖೆಯ ಅಧೀನದಲ್ಲಿರುವ ಡಿ. ದೇವರಾಜ ಅರಸು ಟ್ರಕ್‌ ಟರ್ಮಿನಲ್‌ನಲ್ಲಿ ಕಾಮಗಾರಿಯನ್ನೇ ನಡೆಸದೆ ₹ 55 ಕೋಟಿ ದುರ್ಬಳಕೆ ಮಾಡಿರುವ ಆರೋಪದ ಕುರಿತು ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದು, ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಶೋಧ ನಡೆಸಿದ್ದಾರೆ.

ಲಾರಿ ಚಾಲಕರು ಮತ್ತು ಸಿಬ್ಬಂದಿಯ ಬಳಕೆಗಾಗಿ ರಾಜ್ಯದ ವಿವಿಧೆಡೆ ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ಬಿಡುಗಡೆ ಮಾಡಿದ್ದ ₹55 ಕೋಟಿಯನ್ನು ಅರಸು ಟ್ರಕ್‌ ಟರ್ಮಿನಲ್‌ ಅಧ್ಯಕ್ಷ ಡಿ.ಎಸ್‌. ವೀರಯ್ಯ ಮತ್ತು ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಶಂಕರಪ್ಪ ಸೇರಿ ಕಾಮಗಾರಿ ನಡೆಸದೇ ವಿವಿಧ ಕಂಪನಿಗಳ ಖಾತೆಗಳಿಗೆ ವರ್ಗಾಯಿಸಿ ಅಕ್ರಮ ಎಸಗಿದ್ದಾರೆ ಎಂಬ ಆರೋಪದ ಕುರಿತು ತನಿಖೆ ಆರಂಭಿಸಲಾಗಿದೆ.

Also Read  ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ➤ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಸಚಿವ ಎಸ್.ಅಂಗಾರ ಭೇಟಿ

 

error: Content is protected !!
Scroll to Top