ಕಾಂಗ್ರೆಸ್ ಅಂತಿಮ ಪಟ್ಟಿ ರಿಲೀಸ್  ➤ ಮಂಗಳೂರು ಉತ್ತರಕ್ಕೆ ಇನಾಯತ್ ಅಲಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.20. ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಂತಿಮ ಪಟ್ಟಿ ಹಾಗೂ 6ನೇ ಪಟ್ಟಿಯನ್ನು ರಾತ್ರೋರಾತ್ರಿ ಸಭೆ ನಡೆಸಿ ಬಿಡುಗಡೆ ಮಾಡಿದ್ದು ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಿ ಇನಾಯತ್ ಅಲಿ ಅವರನ್ನು ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಿದೆ ಎಂದು ತಿಳಿದು ಬಂದಿದೆ.

ಮಂಗಳೂರು ಉತ್ತರದ ಅಭ್ಯರ್ಥಿಯನ್ನು ‌ಕೊನೆಗೂ ಘೋಷಣೆ ಮಾಡಿದೆ. ಇಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹಾಗೂ ಮಾಜಿ ಶಾಸಕ ಮೊಯ್ದಿನ್ ಬಾವ ಅವರು ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಅವರು ಕಾಂಗ್ರೆಸ್ ವಿರುದ್ದ ಬಂಡಾಯದ ಸುಳಿವು‌ ನೀಡಿದ್ದಾರೆ ಎನ್ನಲಾಗಿದೆ.

Also Read  ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯಲ್ಲಿ 100ರೂ.ಇಳಿಕೆ

 

error: Content is protected !!
Scroll to Top