(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.20. ಬಟ್ಟೆ ತೊಳೆಯಲು ನದಿಗೆ ಹೋಗಿದ್ದ ಮಹಿಳೆಯೋರ್ವರು ನೇತ್ರಾವತಿ ನದಿಯಲ್ಲಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳದ ಬರಿಮಾರು ಗ್ರಾಮದ ಬುರ್ದು ನಿವಾಸಿ ರಾಮಕ್ಕು(58) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಬಡ ಕುಟುಂಬದ ಮಹಿಳೆ ಇವರಾಗಿದ್ದು, ಬೀಡಿ ಕಟ್ಟಿ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ.