(ನ್ಯೂಸ್ ಕಡಬ) newskadaba.com.ನವದೆಹಲಿ,ಏ.20. ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮತ್ತೆ ಹಿನ್ನಡೆಯಾಗಿದೆ. ಜೈಲು ಶಿಕ್ಷೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಕೋರ್ಟ್ ವಜಾ ಮಾಡಿ ಆದೇಶ ನೀಡಿದೆ.
ಸೂರತ್ ಸೆಷನ್ಸ್ ಕೋರ್ಟ್ ನ ಹೆಚ್ಚುವರಿ ನ್ಯಾಯಾಧೀಶ ಆರ್ ಪಿ ಮೊಗೇರಾ, ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ತೀರ್ಪನ್ನು ಇವತ್ತಿಗೆ ಕಾಯ್ದಿರಿಸಿದ್ದರು. ‘ಸರ್ ನೇಮ್ ಮೋದಿ’ ಅಂತಾ ಇರೋರೆಲ್ಲ ಕಳ್ಳರು ಎಂದು ರಾಹುಲ್ ಗಾಂಧಿ ಹೇಳಿದ್ದರು.
ಈ ಸಂಬಂಧ ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಹುಲ್ ತಪ್ಪಿತಸ್ಥ ಎಂದು ತೀರ್ಪು ನೀಡಿದ್ದ ಕೋರ್ಟ್ 15 ಸಾವಿರ ರೂಪಾಯಿ ದಂಡದೊಂದಿಗೆ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು. ಜೈಲು ಶಿಕ್ಷೆ ಪ್ರಕಟವಾದ ಬೆನ್ನಲ್ಲೇ, ಲೋಕಸಭಾ ಸದಸ್ಯತ್ವದಿಂದಲೂ ಅನರ್ಹಗೊಂಡಿದ್ದರು. ಒಂದು ವೇಳೆ ಇವತ್ತು ಕೋರ್ಟ್ ಮಾನಷ್ಟ ಮೊಕ್ಕದಮೆ ಕೇಸ್ ಗೆ ತಡೆ ನೀಡಿದ್ದರೆ, ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಸ್ಥಾನ ವಾಪಸ್ ಆಗುತ್ತಿತ್ತು.