ಮಂಗಳೂರು: ಮಣ್ಣು ಕುಸಿದು ಜೆಸಿಬಿ ಚಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.20. ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಜೆಸಿಬಿಯ ಮೇಲೆ ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಂಭವಿಸಿದೆ.


ಜೆಸಿಬಿಯ ಚಾಲಕ ಝಾರ್ಖಂಡ್‌ ಕೊಸಾರ್‌ ಅನ್ಸಾರಿ (22) ಮೃತರು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಬಜಪೆ ಪೊಲೀಸರು ಧಾವಿಸಿ ಬಂದಿದ್ದರು. ಸ್ಥಳೀಯರು ಹಾಗೂ ಎರಡು ಜೆಸಿಬಿ ಸಹಾಯದಿಂದ ಮಣ್ಣು ತೆಗೆಯಲಾಯಿತಾದರೂ, ಅದಾಗಲೇ ಚಾಲಕ ಮೃತಪಟ್ಟಿದ್ದರು ಎನ್ನಲಾಗಿದೆ.

Scroll to Top