‘ಜನಸಂಖ್ಯೆಯಲ್ಲಿ ಚೀನಾವನ್ನೇ ಹಿಂದಿಕ್ಕಿದ ಭಾರತ’     ➤ ವಿಶ್ವಸಂಸ್ಥೆ ವರದಿ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.21. ಭಾರತ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ರಾಷ್ಟ್ರವಾಗಿದ್ದು, ಆ ಮೂಲಕ ಇದೀಗ ನೆರೆಯ ದೇಶ ಚೀನಾವನ್ನೇ ಹಿಂದಿಕ್ಕಿದೆ ಎಂದು ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳಲ್ಲಿ ಉಲ್ಲೇಖಿಸಲಾಗಿದೆ.

ವಿಶ್ವಸಂಸ್ಥೆಯ ವರದಿ ಪ್ರಕಾರ, ಭಾರತ ಕೋಟಿ ಜನಸಂಖ್ಯೆ ಹೊಂದಿದ್ದರೆ, ಚೀನಾ 142.57 ಕೋಟಿ ಜನಸಂಖ್ಯೆ ಹೊಂದಿದೆ. ಭಾರತದ ಜನಸಂಖ್ಯೆಯ ಸುಮಾರು 1/4 ರಷ್ಟು ಜನರು 14 ವರ್ಷದ ಒಳಗಿನವರಾಗಿದ್ದಾರೆ. ಜನಸಂಖ್ಯೆಯ ಶೇಕಡಾ 68ರಷ್ಟು ಜನರು 15 ರಿಂದ 64 ವಯಸ್ಸಿನವರಾಗಿದ್ದರೆ, ಶೇಕಡಾ 7ರಷ್ಟು ಜನರು 65 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ.

Also Read  ದುಬೈನಲ್ಲಿ 2026ಕ್ಕೆ ಹಾರುವ ಟ್ಯಾಕ್ಸಿ!

 

error: Content is protected !!
Scroll to Top