ನಾಮಪತ್ರ ಸಲ್ಲಿಸಲು ಆಟೋದಲ್ಲಿ ಬಂದಿಳಿದ ಬಿಜೆಪಿ ಅಭ್ಯರ್ಥಿ..!

(ನ್ಯೂಸ್ ಕಡಬ)Newskadaba.com ವಿಜಯಪುರ,ಏ.21 ನಾಗಠಾಣ ಕ್ಷೇತ್ರದ ಅಚ್ಚರಿಯ ಅಭ್ಯರ್ಥಿ, ಪಕ್ಷದ ಸಾಮಾನ್ಯ ಕಾರ್ಯಕರ್ತ ಸಂಜೀವ ಐಹೊಳಿ ಆಟೋದಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿರುವುದು ಮತ್ತೊಂದು ಅಚ್ಚರಿಗೆ ಕಾರಣವಾಗಿದೆ. ನಾಮಪತ್ರ ಸಲ್ಲಿಕೆಯ ಅಂತಿಮ ದಿನದಂದು ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಂಜೀವ ಐಹೊಳ್ಳಿ ನಾಮಪತ್ರ ಸಲ್ಲಿಕೆ ಕೇಂದ್ರಕ್ಕೆ ತೆರಳಲು ವಾಹನಕ್ಕಾಗಿ ತಡಕಾಡಿದರು.

ತೀರ ಸಾಮಾನ್ಯ ಕಾರ್ಯಕರ್ತನಾದ ಸಂಜೀವನ ಹೆಸರಿನಲ್ಲಿ ಸ್ವಂತ ಕಾರು, ಬೈಕ್ ಸಹ ಇಲ್ಲ. ಹೀಗಾಗಿ ನಾಮಪತ್ರ ಸಲ್ಲಿಕೆ ಕೇಂದ್ರಕ್ಕೆ ಬರಲು ಆಟೋಕ್ಕಾಗಿ ಕಾಯ್ದು ನಿಂತರು. ಬಹಳ ಹೊತ್ತಿನ ಬಳಿಕ ಬಂದ ಆಟೋ ಹತ್ತಿ ಜಿಲ್ಲಾ ಪಂಚಾಯಿತಿ ಆವರಣದ ನಾಮಪತ್ರ ಸಲ್ಲಿಕೆ ಕೇಂದ್ರಕ್ಕೆ ಆಗಮಿಸಿದ್ದು ಕಾರ್ಯಕರ್ತ ರನ್ನು ಸಹ ಅಚ್ಚರಿಗೀಡು ಮಾಡಿತು.

Also Read  ಐಪಿಎಸ್ ಅಧಿಕಾರಿಗೂ ವಕ್ಕರಿಸಿದ ಕೊರೋನಾ

 

 

 

error: Content is protected !!
Scroll to Top