ಹೈಕೋರ್ಟ್, ಸುಪ್ರೀಂಕೋರ್ಟ್‌ನ ತೀರ್ಪುಗಳು ಕನ್ನಡದಲ್ಲಿ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.21. ನ್ಯಾಯಾಂಗದ ಆದೇಶಗಳನ್ನು ಸಾಮಾನ್ಯ ಜನ ಮತ್ತು ದಾವೆದಾರರಿಗೆ ಅರ್ಥೈಸುವುದಕ್ಕಾಗಿ ಸುಪ್ರೀಂ ಕೋರ್ಟ್ ಮತ್ತು ಕರ್ನಾಟಕ ಹೈಕೋರ್ಟ್‌ ನ ಒಟ್ಟು 197 ಪ್ರಮುಖ ತೀರ್ಪುಗಳನ್ನು ಕನ್ನಡೀಕರಿಸಿ ಹೈಕೋರ್ಟ್ ವೆಬ್ಸೈಟ್‌ನಲ್ಲಿ ಪ್ರಕಟಿಸಿದೆ.

ಕೇರಳ, ಗುಜರಾತ್ ಮತ್ತು ಮಹಾರಾಷ್ಟ್ರ ಹೈಕೋರ್ಟ್‌ಗಳು ಈಗಾಗಲೇ ಸ್ಥಳೀಯ ಭಾಷೆಯಲ್ಲಿ ತೀರ್ಪುಗಳನ್ನು ಪ್ರಕಟಿಸಲು ಆರಂಭಿಸಿವೆ. ಆದರೆ, ಅತಿ ಹೆಚ್ಚು ತೀರ್ಪುಗಳನ್ನು ಕನ್ನಡದಲ್ಲಿ ಪ್ರಕಟಿಸಿರುವುದು ಕರ್ನಾಟಕ ಹೈಕೋರ್ಟ್ ಮಾತ್ರ ಎಂದು ತಿಳಿದು ಬಂದಿದೆ.

Scroll to Top