ಬಿಜೆಪಿ ಅಭ್ಯರ್ಥಿ ಸಚಿವ ಬಿ.ಸಿ. ನಾಗೇಶ್ ನೀತಿ ಸಂಹಿತೆ ಉಲ್ಲಂಘನೆ..!   ➤ ಪ್ರಕರಣ ದಾಖಲು..!  

(ನ್ಯೂಸ್ ಕಡಬ)Newskadaba.com ತುಮಕೂರು,ಏ.21 ತುಮಕೂರು ಜಿಲ್ಲೆ ತಿಪಟೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಬಿ.ಸಿ. ನಾಗೇಶ್ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.ನಾಗೇಶ್ ರವರು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಚುನಾವಣಾ ಅಧಿಕಾರಿ ಕಚೇರಿಯ 100 ಮೀಟರ್ ವ್ಯಾಪ್ತಿಯೊಳಗೆ ನಾಲ್ಕು ಖಾಸಗಿ ಕಾರ್, ಒಂದು ಬೆಂಗಾವಲು ವಾಹನ ತಂದಿದ್ದರು.

ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ನಾಮಪತ್ರ ಸಲ್ಲಿಕೆಗೆ ಬರುವ ಅಭ್ಯರ್ಥಿಗಳಿಗೆ ಚುನಾವಣಾ ಅಧಿಕಾರಿ ಕಚೇರಿಯ 100 ಮೀಟರ್ ವ್ಯಾಪ್ತಿಯಲ್ಲಿ ಮೂರು ವಾಹನ ತರಲು ಮಾತ್ರ ಅವಕಾಶವಿದೆ. ಅದಕ್ಕಿಂತ ಹೆಚ್ಚಿನ ವಾಹನ ತಂದ ಬಗ್ಗೆ ಮಾಹಿತಿ ಪಡೆದ ಚುನಾವಣಾ ಅಧಿಕಾರಿಗಳು ಸಚಿವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ರೈತರ ಮನವಿ ಮೇರೆಗೆ ಇನ್ನೂ 15 ದಿನ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ

 

 

 

ವಿವರಗಳಿಗಾಗಿ👇ಕ್ಲಿಕ್

error: Content is protected !!
Scroll to Top