ಧರ್ಮಸ್ಥಳ: ಡಿಕೆಶಿ ಹೆಲಿಕಾಪ್ಟರ್ ಧಿಡೀರ್ ತಪಾಸಣೆ

(ನ್ಯೂಸ್ ಕಡಬ)newskadaba.com ಧರ್ಮಸ್ಥಳ, ಏ.23. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಧರ್ಮಸ್ಥಳಕ್ಕೆ ಪ್ರವಾಸ ಕೈಗೊಂಡಿದ್ದು, ಹೆಲಿಪ್ಯಾಡ್ ನಲ್ಲಿ ಕುಟುಂಬ ಸಮೇತ ಬಂದಿಳಿದರು ಎಂದು ವರದಿ ತಿಳಿಸಿದೆ.


ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅಧಿಕಾರಿಗಳು ರಾಜಕಾರಣಿಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಡಿ.ಕೆ.ಶಿವಕುಮಾರ್ ಅವರ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಇತ್ತೀಚೆಗೆ ಧರ್ಮಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂದಿದ್ದಾಗಲೂ ಅವರ ಹೆಲಿಕಾಪ್ಟರ್ ಅನ್ನು ಪರಿಶೀಲನೆ ನಡೆಸಲಾಗಿತ್ತು ಎನ್ನಲಾಗಿದೆ.

Scroll to Top