ಮಂಗಳೂರು: ದೋಣಿಯಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.23. ಮೀನುಗಾರಿಕೆಗೆ ತೆರಳಿ ದೋಣಿಯಲ್ಲಿ ಬಲೆಯನ್ನು ಎಳೆಯುತ್ತಿರುವವಾಗ ಸಮುದ್ರದ ಅಲೆಯ ಹೊಡೆತಕ್ಕೆ ಸಿಲುಕಿ ಮೀನುಗಾರರೊಬ್ಬರು ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ನಾಗರಾಜ (43) ಎಂದು ಗುರುತಿಸಲಾಗಿದೆ. ಇನ್ನು ದೋಣಿಯಲ್ಲಿದ್ದವರು ನೀರಿಗೆ ಬಿದ್ದ ತಕ್ಷಣ ನಾಗರಾಜ ಅವರನ್ನು ನೀರಿನಿಂದ ಮೇಲಕ್ಕೆತ್ತಿ ಉಪಚರಿಸಿ ಉಡುಪಿ ಜಿಲ್ಲಾಸ್ಪತ್ರೆಗೆ ಸೇರಿಸಿ ಬಳಿಕ ಅಲ್ಲಿಂದ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

 

Scroll to Top