(ನ್ಯೂಸ್ ಕಡಬ)Newskadaba.com ಕಲಬುರಗಿ,ಏ.23 ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿಯಲ್ಲಿ ನಡೆದಿದೆ.ಮೃತನನ್ನು ರಾಜಸ್ಥಾನ ಮೂಲದ ಚಾಲಕ ಅಬ್ಬಾಸ್ (39) ಎಂದು ಗುರುತಿಸಲಾಗಿದೆ.
ಹುಮನಾಬಾದ್ ಕಡೆಯಿಂದ ಕಲಬುರಗಿಗೆ ಬರುತ್ತಿದ್ದ ಲಾರಿ ಹಾಗೂ ಜೇವರ್ಗಿಯಿಂದ ಹುಮನಾಬಾದ್ ಗೆ ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ.ಪರಿಣಾಮ ಓರ್ವ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದೆ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.