(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23 ನಮ್ಮ ಮೆಟ್ರೋ ಹಸಿರು ಮಾರ್ಗದ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಈ ತೊಂದರೆ ಉಂಟಾಗಿದೆ.
7 ಗಂಟೆಗೆ ಆರಂಭವಾಗಬೇಕಿದ್ದ ರೈಲುಗಳ ಸಂಚಾರ ತಡವಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ನೇರಳೆ ಮಾರ್ಗದಲ್ಲಿ ರೈಲುಗಳು ಎಂದಿನಂತೆ ಸಂಚಾರ ನಡೆಸುತ್ತಿವೆ.