ಹುಬ್ಬಳ್ಳಿಗೆ ಆಗಮಿಸಿದ ರಾಹುಲ್ ಗಾಂಧಿಗೆ ಸ್ವಾಗತ ಕೋರಿದ ಜಗದೀಶ್ ಶೆಟ್ಟರ್..!

(ನ್ಯೂಸ್ ಕಡಬ)Newskadaba.com ಹುಬ್ಬಳ್ಳಿ,ಏ.23  ರಾಜ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಇದೀಗ ಹುಬ್ಬಳ್ಳಿ ಏರ್ ಪೋರ್ಟ್ ಗೆ ಆಗಮಿಸಿದ್ದಾರೆ.ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿಗೆ ಜಗದೀಶ್ ಶೆಟ್ಟರ್ ಸ್ವಾಗತ ಕೋರಿದರು.ಈ ವೇಳೆ ಹಲವು ಕಾಂಗ್ರೆಸ್ ನಾಯಕರು ಸಾತ್ ನೀಡಿದರು.

ಹುಬ್ಬಳ್ಳಿಯಿಂದ ರಾಹುಲ್ ಗಾಂಧಿ ಕೂಡಲಸಂಗಮಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಕರ್ನಾಟಕ ಚುನಾವಣೆಯ ಹೊತ್ತಿನಲ್ಲಿ ರಾಜ್ಯಕ್ಕೆ ಸ್ಟಾರ್ ಪ್ರಚಾರಕರ ಆರ್ಭಟ ಹೆಚ್ಚಾಗಿದೆ. ಈಗಾಗಲೇ ಬಿಜೆಪಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.

Also Read  ಇಂದಿನ ಹವಮಾನ

 

 

 

 

 

error: Content is protected !!