ಸರ್ಕಾರಿ ಆಸ್ಪತ್ರೆಯ ಡ್ಯೂಟಿ ರೂಂನಲ್ಲೇ ವೈದ್ಯ ಆತ್ಮಹತ್ಯೆ    ➤ ಸ್ಥಳದಲ್ಲಿ ಡೆತ್ ನೋಟು ಪತ್ತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.24. ಸರ್ಕಾರಿ ಆಸ್ಪತ್ರೆಯಲ್ಲೇ ವೈದ್ಯರೊಬ್ಬರು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ತಿಲಕ್​ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಡಾ.ಎಸ್.ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡ ವೈದ್ಯರು. ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದ ರೇಣುಕಾನಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತು ಅವರು ಆಸ್ಪತ್ರೆಯ ಡ್ಯೂಟಿ ರೂಮ್​ನಲ್ಲೇ ತಾಯಿಯ ಸೀರೆಯಿಂದ ಫ್ಯಾನ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

error: Content is protected !!
Scroll to Top