ಹೆಚ್‌ಡಿಕೆ ಆರೋಗ್ಯ ವಿಚಾರಿಸಿದ ನಿರ್ಮಲಾನಂದ ಶ್ರೀಗಳಿಂದ..!

(ನ್ಯೂಸ್ ಕಡಬ)Newskadaba.com ಮಣಿಪಾಲ್,ಏ.24 ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿಯವರನ್ನು ಆದಿಚುಂಚನಗಿರಿ ಮಠಾಧ್ಯಕ್ಷರಾದ ನಿರ್ಮಲಾನಂದನಾಥ ಶ್ರೀಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.ಜ್ವರದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ಹೆಚ್‌ಡಿ ಕುಮಾರಸ್ವಾಮಿ ರಾಜಕೀಯ ಅಖಾಡಕ್ಕೆ ಧುಮುಕಿದ್ದರು. ರಾಜ್ಯಾದ್ಯಂತ ಪ್ರವಾಸ ಮಾಡಿದ್ದ ಅವರು, ಪಕ್ಷವನ್ನು ಸಂಘಟಿಸಲು ಹಗಲಿರುಳು ದಣಿವರಿಯದೆ ದುಡಿದಿದ್ದರು.

Also Read  ಬ್ಲೂವೇಲ್ ನಂತರ ಇದೀಗ ಧಾರವಾಹಿ ಸರದಿ ► ಧಾರವಾಹಿ ನೋಡಿ ಮೈಗೆ ಬೆಂಕಿ ಹಚ್ಚಿಕೊಂಡ ಮಗು ಮೃತ್ಯು

error: Content is protected !!
Scroll to Top