(ನ್ಯೂಸ್ ಕಡಬ)newskadaba.com ಮಂಗಳೂರು, ಏ.24. ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಪೋನ್ ಕರೆ ಮಾಡಿ ಬೆದರಿಕೆ ಹಾಕಿರುವ ಬಗ್ಗೆ ದೂರು ದಾಖಲಾಗಿದೆ.
ಜಿಲ್ಲಾಧಿಕಾರಿಯ ಕಚೇರಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಭೆ ನಡೆಸುತ್ತಿರುವ ವೇಳೆ ಡಿಸಿ ಅವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಅಪರಿಚಿತ ವ್ಯಕ್ತಿಯೊಬ್ಬ ಕೆಟ್ಟ ಶಬ್ದಗಳಿಂದ ಬೈದ ಬಗ್ಗೆ ದೂರು ದಾಖಲಾಗಿದೆ.