ಬಂಟ್ವಾಳ: ಎ.26 ರಂದು ಯೋಗಿ ಆದಿತ್ಯನಾಥ್ ರೋಡ್ ಶೋ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.24. ದಕ್ಷಿಣ ಕನ್ನಡ ಜಿಲ್ಲೆಯ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪರ ಪ್ರಚಾರಕ್ಕೆ ಈ ಬಾರಿ ಮತ್ತೆ ಯೋಗಿ ಆದಿತ್ಯನಾಥ್ ಬರುವ ಸಾಧ್ಯತೆ ಇದೆ ಎಂಬ ಮಾಹಿತಿ ಬಿಜೆಪಿ ಮೂಲಗಳಿಂದ ಲಭ್ಯವಾಗಿದೆ. ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರ ಪರವಾಗಿ ಮತಯಾಚನೆಗಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸುವ ಸಾಧ್ಯತೆಯ ಬಗ್ಗೆ ವರದಿಯಾಗಿದೆ.

ಕಳೆದ ಬಾರಿ ಕೂಡ ರಾಜೇಶ್ ನಾಯ್ಕ್ ಅವರ ಪರವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೈಕಂಬದಿಂದ ಬಿಸಿರೋಡಿನ ವೃತ್ತದ ವರಗೆ ರೋಡ್ ಶೋ ನಡೆಸಿದ್ದರು. ಅದೇ ಮಾದರಿಯಲ್ಲಿ ಮತ್ತೆ ಈ ಬಾರಿ ರೋಡ್ ಶೋ ಮೂಲಕ ಯುವಕರ ಸ್ಟಾರ್ ಆಗಿರುವ ಯೋಗಿ ಆದಿತ್ಯನಾಥ್ ಅವರು ರೋಡ್ ಶೋ ಮೂಲಕ ಪ್ರಚಾರ ಮಾಡಲಿದ್ದಾರೆ.

Also Read  ಕರ್ನಾಟಕ ಪ್ಯಾರಾ ಮೆಡಿಕಲ್ ಬೋರ್ಡ್ ಫಲಿತಾಂಶ ಪ್ರಕಟ ➤ ಮನ್ಶರ್ ಕಾಲೇಜು ವಿದ್ಯಾರ್ಥಿನಿಯರ ವಿಶಿಷ್ಟ ಸಾಧನೆ

 

error: Content is protected !!
Scroll to Top