ಸಿಎಂಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ವ್ಯಕ್ತಿ.! ವ್ಯಕ್ತಿಗೆ ಕ್ಲಾಸ್ ತೆಗೆದುಕೊಂಡ ಜನ!

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಏ.24 ವಿಧಾನಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎಲ್ಲಾ ರಾಜಕಾರಣಿಗಳು ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅಲ್ಲದೆ ರೋಡ್‌ ಶೋಗಳ ಮೂಲಕ ಅಬ್ಬರದ ಪ್ರಚಾರಕ್ಕೂ ಇಳಿದಿದ್ದಾರೆ.

ಇದೇ ರೀತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ರೋಡ್‌ ಶೋ ಮಾಡುವ ವೇಳೆ ಅವರಿಗೆ ವ್ಯಕ್ತಿಯೊಬ್ಬರು ಅವಾಚ್ಯ ಶಬ್ಧಗಳಿಂದ ನಿಂಧಿಸಿದ ಘಟನೆ ನಡೆದಿದೆ. ನಂತರ ರೊಚ್ಚಿಗೆದ್ದ ಜನ ಸಿಎಂ ಗೆ ಬೈದಿದ್ದ ವ್ಯಕ್ತಿಗೆ ಕ್ಲಾಸ್‌ ತೆಗೆದುಕೊಂಡ ಘಟನೆಯೂ ನಡೆದಿದೆ. ಬಳಿಕ ಆತನನನ್ನು ಪೊಲೀಸರೇ ಜೀಪಿನಲ್ಲಿ ತುಂಬಿಕೊಂಡು ಹೋಗಿದ್ದಾರೆ.

Also Read  ಎಂಟು ಮಂದಿ ಶಾಸಕರಿಂದ ಸಚಿವರಾಗಿ ಪ್ರಮಾಣವಚನ ಸ್ವೀಕಾರ

 

 

error: Content is protected !!
Scroll to Top