ಏ.26ರಂದು ಯೋಗಿ ಆದಿತ್ಯನಾಥ್ ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ.!  

(ನ್ಯೂಸ್ ಕಡಬ)Newskadaba.comಮಂಡ್ಯ,ಏ.24 ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಏ. 26ರಂದು ಮಂಡ್ಯಕ್ಕೆ ಭೇಟಿ ನೀಡಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿಪಿ ಉಮೇಶ್ ತಿಳಿಸಿದರು.

ಅಂದು ಬೆಳಗ್ಗೆ 11 ಗಂಟೆಗೆ ಆಗಮಿಸುವ ಯೋಗಿ ಆದಿತ್ಯನಾಥ್ ಅವರು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ನಗರದಲ್ಲಿ ರೋಡ್‌ಶೋ ನಡೆಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ರಾಜೇಂದ್ರ ಪ್ರಸಾದ್ ರಸ್ತೆ,ಅಂಬೇಡ್ಕರ್ ವೃತ್ತ,ನೂರಡಿ ರಸ್ತೆ, ಹೊಸಹಳ್ಳಿ ವೃತ್ತ, ವಿಶ್ವೇಶ್ವರಯ್ಯ ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ರೋಡ್‌ಶೋ ನಡೆಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುವರು.

Also Read  ಕೇಸರಿ ಶಾಲು ಹಾಕುವ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ➤ ಚೂರಿ ಇರಿತ..!

 

 

 

 

error: Content is protected !!
Scroll to Top