(ನ್ಯೂಸ್ ಕಡಬ)newskadaba.com ನವದೆಹಲಿ, ಏ.24. ತಿರುವನಂತಪುರಂ ಮತ್ತು ಕಾಸರಗೋಡು ನಡುವಿನ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ತಿರುವನಂತಪುರಂ ಸೆಂಟ್ರಲ್ ಸ್ಟೇಷನ್‌ನಲ್ಲಿ ಚಾಲನೆ ನೀಡಲಿದ್ದಾರೆ.
ಪ್ರಧಾನಿ ಕಾರ್ಯಾಲಯದ ಪ್ರಕಾರ, ವಂದೇ ಭಾರತ್ ರೈಲು ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು 11 ಜಿಲ್ಲೆಗಳಲ್ಲಿ ಸಂಚರಿಸಲಿದೆ.