ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ಧರಾಮಯ್ಯ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25 ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಹೈಕಮಾಂಡ್‌ ನಾಯಕರ ಅಬ್ಬರದ ಪ್ರಚಾರದ ನಡುವೆ ರೈತರ ಜೀವನಾಡಿ ನಂದಿನಿ ಹಾಗೂ ಅಮುಲ್‌ ವಿವಾದ ಜೋರಾಗಿ ಸದ್ದು ಮಾಡುತ್ತಿದೆ. ಈ ಕುರಿತು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನಲ್ಲಿ ಸಭೆಯೊಂದನ್ನು ನಡೆಸಿದ್ದಾರೆ.

Also Read  ಎಸ್ಎಸ್ಎಲ್ಸಿ ಫಲಿತಾಂಶ: ತಂದೆಯ ಸಾವಿನ ನೋವಲ್ಲೂ ಪರೀಕ್ಷೆ ಬರೆದ ದರ್ಶಿನಿಗೆ 80% ಅಂಕ

ಆ ಸಭೆಯಲ್ಲಿ ಚುನಾವಣಾ ಪ್ರಚಾರವನ್ನು ಮಾಡಿಕೊಂಡು ಹೋಗಿದ್ದರೆ ನಮಗೇನೂ ತಕರಾರುಗಳು ಇರುತ್ತಿರಲಿಲ್ಲ, ಆದರೆ ಕರ್ನಾಟಕಕ್ಕೆ ಚಿನ್ನದ ಕಿರೀಟವನ್ನೆ ತೊಡಿಸಿದ್ದೇವೆಂದು ಆತ್ಮದ್ರೋಹದ ಮಾತನಾಡಿದ್ದಾರೆ. ಕರ್ನಾಟಕಕ್ಕೆ ಅಮುಲ್ ಬಂದಿದ್ದು ರಾಜ್ಯದ ರೈತರ ನೆರವಿಗೆ ಎಂಬಂತೆ ಮಾತನಾಡಿದ್ದಾರೆ.

 

 

error: Content is protected !!
Scroll to Top