ಕಾಸರಗೋಡು: ರೈಲಿನಿಂದ ಎಸೆಯಲ್ಪಟ್ಟು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.25. ರೈಲಿನಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಉಪ್ಪಳ ಪೆರಿಂಗಡಿಯಲ್ಲಿ ನಡೆದಿದೆ. ಪಾಲಕ್ಕಾಡ್ ನ ಸಾಬೀರ್(32) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಸ್ನೇಹಿತನ ಜೊತೆ ಗೋವಾಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಗೋವಾಕ್ಕೆ ತಲಪಿದಾಗ ಸಾಬೀರ್ ನಾಪತ್ತೆಯಾಗಿದ್ದು , ಈ ಬಗ್ಗೆ ಸ್ನೇಹಿತನು ಗೋವಾ ಪೊಲೀಸರಿಗೆ ದೂರು ನೀಡಿದ್ದರು. ಗೋವಾ ಪೊಲೀಸರು ಕೇರಳ ಮತ್ತು ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಕುಂಬಳೆ ಪೊಲೀಸ್ ಠಾಣೆ ಯ ಪೆರಿಂಗಡಿಯ ರೈಲ್ವೆ ಹಳಿ ಬಳಿ ಮೃತದೇಹ ಪತ್ತೆಯಾಗಿದೆ.

Also Read  ಮಾದಕ ವಸ್ತು ಸಾಗಾಟ: ಇಬ್ಬರು ಅರೆಸ್ಟ್..!

error: Content is protected !!
Scroll to Top