(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25,ಕಾಯಮಾತಿ ನಿರೀಕ್ಷೆಯಲ್ಲಿದ್ದ ಪೌರ ಕಾರ್ಮಿಕರಿಗೆ ಬಿಗ್ ಶಾಕ್ ಎದುರಾಗಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ.

ಬಿಬಿಎಂಪಿ ಸೇರಿದಂತೆ ರಾಜ್ಯದ 102 ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ನೇರ ವೇತನ ಪಾವತಿಯಡಿ ಕಾರ್ಯನಿರ್ವಹಿಸುತ್ತಿರುವ 40 ಸಾವಿರಕ್ಕೂ ಹೆಚ್ಚು ಪೌರ ಕಾರ್ಮಿಕರನ್ನು ಹಂತ ಹಂತವಾಗಿ ಕಾಯಂಗೊಳಿಸುವುದಕ್ಕೆ ಸರ್ಕಾರ ನಿರ್ಧರಿಸಿ, ಈ ಸಂಬಂಧ ಆದೇಶವನ್ನೂ ಹೊರಡಿಸಿತ್ತು.

ಈ ಪೈಕಿ ಬಿಬಿಎಂಪಿಯ 14,980 ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಬೇಕಿದೆ. ರಾಜ್ಯದ ವಿವಿಧ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ 7,460 ಗುತ್ತಿಗೆ ಪೌರ ಕಾರ್ಮಿಕರನ್ನು ನೇಮಕಗೊಳಿಸಬೇಕಿದೆ.ಈ ನಡುವೆ ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ. ಹೀಗಾಗಿ ಇಡೀ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ.

Also Read  ಐಟಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸದಂತೆ ತಡೆ.!➤ 9 ಡಿಎಂಕೆ ಬೆಂಬಲಿಗರು ಅರೆಸ್ಟ್

 

 

 

* ಚುನಾವಣೆಯ ನೀತಿ ಸಂಹಿತೆ ಜಾರಿ ಹಿನ್ನೆಲೆ!*

 

*➤ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆ ಸ್ಥಗಿತ..!*

 

error: Content is protected !!
Scroll to Top