‘ಸೋಲಿನ ಹತಾಶೆಯಿಂದ ಕಾಂಗ್ರೆಸ್ ನಾಯಕರು ನನ್ನ ವಿರುದ್ಧ ಆರೋಪಕ್ಕೆ ಮುಂದಾಗಿದ್ದಾರೆ’ ➤ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.25. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಸೋಲಿನ ಹತಾಶೆಯಿಂದ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪಕ್ಕೆ ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಈ ಕುರಿತು ಮಾತನಾಡಿರುವ ಅವರು, ಭ್ರಷ್ಟ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಮಾಡಿರುವ ಆರೋಪ ರಾಜ್ಯದ ಜನತೆಗೆ ಮಾಡಿದ ಅವಮಾನವಾಗಿದೆ ಎಂದರು. ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನೂರಕ್ಕೆ ನೂರಷ್ಟು ಖಚಿತ. ಇದನ್ನು ಅರಿತು ನನ್ನ ವಿರುದ್ಧ ವೈಯಕ್ತಿಕ ದಾಳಿಗೆ ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.

error: Content is protected !!

Join the Group

Join WhatsApp Group