(ನ್ಯೂಸ್ ಕಡಬ)Newskadaba.com ಕೋಲ್ಕತ್ತಾ,ಏ.26 ಕಾಲುವೆಯಲ್ಲಿ ಬಾಲಕಿಯ ಶವ ಪತ್ತೆಯಾದ ಬಳಿಕ ಸಾವಿನ ವಿರುದ್ಧ ಪ್ರತಿಭಟನೆ ನಡೆಸಿದ ಜನರು ಪಶ್ಚಿಮ ಬಂಗಾಳದ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ.ಉತ್ತರ ದಿನಾಜ್‌ಪುರ ಜಿಲ್ಲೆಯ ಕಲಿಯಗಂಜ್‌ನಲ್ಲಿ ಹಿಂಸಾಚಾರ ನಡೆದಿದೆ. ಆದಿವಾಸಿ ಮತ್ತು ರಾಜ್‌ಬಂಗ್ಷಿ ಸಮುದಾಯಕ್ಕೆ ಸೇರಿದ ಜನರು “ಪೊಲೀಸ್ ನಿಷ್ಕ್ರಿಯತೆ” ವಿರುದ್ಧ ಪ್ರತಿಭಟಿಸಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಪೊಲೀಸ್ ಸಿಬ್ಬಂದಿ ಲಾಠಿ ಚಾರ್ಜ್ ಪ್ರಾರಂಭಿಸಿದರು ಆದರೆ ಗುಂಪು ಪೊಲೀಸ್ ಠಾಣೆಗೆ ಪ್ರವೇಶಿಸಿ ಬೆಂಕಿ ಹಚ್ಚುವುದನ್ನು ತಡೆಯಲು ಸಾಧ್ಯವಾಗಲಿಲ್ಲ ಎಂದು ಸಂಸ್ಥೆ ತಿಳಿಸಿದೆ.ಬುಡಕಟ್ಟು ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪ ಕೇಳಿ ಬಂದಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಪೊಲೀಸ್ ಸಿಬ್ಬಂದಿ ಸಂತ್ರಸ್ತೆಯ ಮೃತದೇಹವನ್ನು ಬೀದಿಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋಗಳು ವೈರಲ್ ಆಗಿತ್ತು.
ಇದರಿಂದ ಆಕ್ರೋಶಗೊಂಡ ಜನ ನ್ಯಾಯಕ್ಕಾಗಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದರಿಂದಾಗಿ ಕಲಿಯಾಗಂಜ್‌ನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿತ್ತು. ಇಂದು ಮತ್ತೆ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆಗೆ ಮುಂದಾಗಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ವಿಷಕಾರಿ ಪದಾರ್ಥಗಳನ್ನು ಸೇವಿಸಿದ್ದರಿಂದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪಶ್ಚಿಮ ಬಂಗಾಳ ಪೊಲೀಸರು ತಿಳಿಸಿದ್ದಾರೆ.