ರ‍್ಯಾಪಿಡೊ ಚಾಲಕನಿಂದ ಅಸಭ್ಯವಾಗಿ ವರ್ತನೆ ➤ ಚಲಿಸುತ್ತಿದ್ದ ಬೈಕ್‌ನಿಂದ ಜಿಗಿದ ಯುವತಿ!

(ನ್ಯೂಸ್ ಕಡಬ) newskadaba.com.ಬೆಂಗಳೂರು, ,ಏ.26. ಯುವತಿಯೊಬ್ಬಳಿಗೆ ರ್ಯಾಪಿಡೊ ಚಾಲಕ ಲೈಂಗಿಕ ಕಿರುಕುಳ ನೀಡಿದ್ದು, ಚಾಲಕನಿಂದ ತಪ್ಪಿಸಿಕೊಳ್ಳಲು  ಯುವತಿ ಚಲಿಸುತ್ತಿದ್ದ ಬೈಕಿನಿಂದ ಜಿಗಿದಿರುವ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದೆ.

ಆರ್ಕಿಟೆಕ್ಚರ್ ಆಗಿರುವ 30 ವರ್ಷದ ಯುವತಿಯೊಬ್ಬಳು ಕಳೆದ ಏ.21ರಂದು ರಾತ್ರಿ 11.30ರ ಸುಮಾರಿನಲ್ಲಿ ಆನ್ಲೈನ್ ಆಯಪ್ ಮೂಲಕ ರ್ಯಾಪಿಡೊ ಬೈಕ್ ನ್ನು ಬುಕ್ ಮಾಡಿದ್ದಳು.ಸ್ಥಳಕ್ಕೆ ಬಂದ ರ್ಯಾಪಿಡೊ ಬೈಕ್ ಚಾಲಕ ಯುವತಿಯನ್ನು ಹತ್ತಿಸಿಕೊಂಡಿದ್ದು, ಅಲ್ಲಿಂದ ಇಂದಿರಾನಗರಕ್ಕೆ ಬೈಕ್ ತೆರಳಬೇಕಿತ್ತು.ಆದರೆ, ಆತ ಅಲ್ಲಿಗೆ ಕರೆದೊಯ್ಯದೆ ಒಟಿಪಿ ಪರಿಶೀಲಿಸುವ ನೆಪದಲ್ಲಿ ಆಕೆಯ ಫೋನ್ ತೆಗೆದುಕೊಂಡು ದೊಡ್ಡಬಳ್ಳಾಪುರಕ್ಕೆ ಹೋಗಲು ಯತ್ನಿಸಿದ್ದಾನೆ.

ಬೈಕ್ ಬೇರೆಡೆ ಹೋಗುವುದನ್ನು ಗಮನಿಸಿದ ಯುವತಿ ಕೂಡಲೇ ಚಾಲಕನನ್ನು ಪ್ರಶ್ನಿಸಿದ್ದಾಳೆ.ಆದರೆ ಇದ್ಯಾವುದಕ್ಕೂ ಉತ್ತರಿಸದ ಆತ ಬೈಕ್ ವೇಗವನ್ನು ಹೆಚ್ಚಿಸಲು ಮುಂದಾಗಿದ್ದಾನೆ.ಇದರಿಂದ ಗಾಬರಿಗೊಂಡ ಯುವತಿ ಕೂಡಲೇ ಆತನ ಬಳಿಯಿದ್ದ ತನ್ನ ಫೋನ್ನನ್ನು ಕಸಿದುಕೊಂಡು ಗಾಡಿ ನಿಲ್ಲಿಸುವಂತೆ ಹೇಳಿದ್ದಾಳೆ.ಆದರೆ ಪಾನಮತ್ತನಾಗಿದ್ದ ಚಾಲಕ ಗಾಡಿ ನಿಲ್ಲಿಸದೆ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದಾನೆ ಎಂದು ತಿಳಿದು ಬಂದಿದೆ.

Also Read  ರಾಜ್ಯದಲ್ಲಿ ಲಾಕ್‍ಡೌನ್ ಮತ್ತೆ ಮುಂದುವರಿಕೆ..? ➤ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

ಕೊನೆಗೆ ಆತನಿಂದ ರಕ್ಷಿಸಿಕೊಳ್ಳಲು ಯುವತಿ ಬಿಎಂಎಸ್ ಕಾಲೇಜು ಸಮೀಪ ಚಲಿಸುತ್ತಿದ್ದಾಗಲೇ ರಾಪಿಡೊ ಬೈಕಿನಿಂದ ಜಿಗಿದಿದ್ದಾಳೆ.  ಈ ಕುರಿತ ಯುವತಿ ಪೊಲೀಸರಿಗೆ ಮತ್ತು ರ್ಯಾಪಿಡೋ ಸಂಸ್ಥೆಗೂ ದೂರು ನೀಡಿದ್ದಾಳೆ.ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದಾರೆ.

error: Content is protected !!
Scroll to Top