ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ➤ ಏ.30 ರಂದು ‘ಮೊಬೈಲ್ ಲೈಟ್ ಬೆಳಗಿಸಿ ನಾನು ವೋಟ್ ಹಾಕುವೆ’ ಎಂಬ ಸಂದೇಶ..! 

(ನ್ಯೂಸ್ ಕಡಬ)Newskadaba.com ವಿಜಯಪುರ,ಏ.26 ಕರ್ನಾಟಕ ವಿಧಾನಸಭಾ ಚುನಾವಣೆ-2023 ರ ಹಿನ್ನೆಲೆಯಲ್ಲಿ ಮತದಾರರ ಶಿಕ್ಷಣ ಹಾಗೂ ಜಾಗೃತಿ ಕಾರ್ಯಕ್ರಮದಡಿ ಕೊಡಗು ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಸ್ವೀಪ್ ಸಮಿತಿ, ಮಡಿಕೇರಿಯಲ್ಲಿನ ರೋಟರಿ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದೆ.

ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಏಪ್ರಿಲ್, 30 ರಂದು ಸಂಜೆ 6.30 ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ (ಮ್ಯಾನ್ಸ್ ಕಾಂಪೌಂಡ್) ನೂರಾರು ಜನರು ನಿಗದಿತ ಸ್ಥಳದಲ್ಲಿ ಸಾಲಾಗಿ ನಿಂತು ‘ಮೊಬೈಲ್ ಲೈಟ್ ಬೆಳಗಿಸಿ ನಾನು ವೋಟ್ ಹಾಕುವೆ’ ಎಂಬ ಸಂದೇಶ ಸಾರುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Also Read  ತಲ್ವಾರ್ ದಾಳಿ ನಡೆಸಿ ಯುವಕನ ಹತ್ಯೆ ➤ ಐವರು ಆರೋಪಿಗಳು ಅರೆಸ್ಟ್

error: Content is protected !!
Scroll to Top