ದೇಶದ ಆರ್ಥಿಕ ಸ್ಥಿತಿ ಸ್ಥಿರವಾಗಿದೆ ಮತ್ತು ಉತ್ತಮವಾಗಿದೆ   ➤ ನಿರ್ಮಲಾ ಸೀತಾರಾಮನ್‌

(ನ್ಯೂಸ್ ಕಡಬ)Newskadaba.comಲಬುರಗಿ,ಏ.27 ದೇಶದ ಆರ್ಥಿಕ ಸ್ಥಿತಿ ಸ್ಥಿರವಾಗಿದೆ ಮತ್ತು ಉತ್ತಮವಾಗಿದೆ. ಪ್ರಸ್ತುತ ಎರಡು ಲಕ್ಷ ಕೋಟಿ ರೂಪಾಯಿ ರೂ. ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು

ಚುನಾವಣ ಪ್ರಚಾರಾರ್ಥ ಹಮ್ಮಿಕೊಂಡಿದ್ದ ಉದ್ಯಮಿಗಳು ಹಾಗೂ ಹೂಡಿಕೆದಾರರ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಪಕ್ಷಗಳು ಹಾಗೂ ಅದರಲ್ಲೂ ಪ್ರಮುಖವಾಗಿ ಕಾಂಗ್ರೆಸ್‌ ಆರೋಪಿಸುತ್ತಿರುವಂತೆ ದೇಶದ ಆರ್ಥಿಕ ಸ್ಥಿತಿ ಡೋಲಾ ಯಮಾನವಾಗಿಲ್ಲ.

ಈಗಾ ಗಲೇ ಎರಡು ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಆ ಮೊತ್ತವನ್ನು ಅಗತ್ಯವಿರುವ ಎಲ್ಲ ಮೂಲಭೂತ ಸೌಲಭ್ಯಗಳನ್ನು ದೇಶದ ಜನರಿಗೆ ಒದಗಿಸಿ ಕೊಡುವ ನಿಟ್ಟಿನಲ್ಲಿ ವ್ಯಯ ಮಾಡಲಾಗುತ್ತಿದೆ. ಇದರಿಂದ ಜಿಡಿಪಿ ಕೂಡ ಮೇಲ್ಮುಖವಾಗಿದೆ ಎಂದರು.

Also Read  ಮಂಗಳೂರಿನಲ್ಲಿ ಮತ್ತಿಬ್ಬರನ್ನು ಬಲಿ ಪಡೆದ ಕೊರೊನಾ

 

 

 

error: Content is protected !!