ಬೆಳ್ತಂಗಡಿ: ಗಾಂಜಾ ಸೇವನೆ ಮಾಡುತ್ತಿದ್ದ ಆರೋಪಿ ಅರೆಸ್ಟ್ !      ➤ 10 ಸಾವಿರ ರೂ. ಮೌಲ್ಯದ ಗಾಂಜಾ ವಶ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.27. ಗುರುವಾಯನಕೆರೆ ಇಲ್ಲಿನ ಸರಕಾರಿ ಪ್ರೌಢ ಶಾಲೆಯ ಹತ್ತಿರ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ.

ಬೆಳ್ತಂಗಡಿ ಪೊಲೀಸರು ಕಾರ್ಯಚರಣೆ ನಡೆಸಿ ಕುವೆಟ್ಟು ಗ್ರಾಮದ ಮನ್ಸೂರ್ ಎಂಬವರ ಪುತ್ರ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಇವರಿಂದ ಹತ್ತು ಸಾವಿರ ರೂ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Scroll to Top