(ನ್ಯೂಸ್ ಕಡಬ)newskadaba.com ಬೆಳಗಾವಿ, ಏ.27. ಯಾವ ನಿರ್ದಿಷ್ಟ ಪ್ರಕರಣದಲ್ಲಿ 40 ಪರ್ಸೆಂಟ್ ಹಣ ಪಡೆದಿದ್ದೇವೆ ಎಂದು ಸ್ಪಷ್ಟವಾಗಿ ಹೇಳಬೇಕು.ಈ ತರಹ ಗಾಳಿಯಲ್ಲಿ ಗುಂಡು ಹೊಡೆಯುವುದರಿಂದ ಪ್ರಯೋಜನ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ 40 ಪರ್ಸೆಂಟ್ ಕಮಿಷನ್ ತನಿಖೆ ಕೈಗೊಳ್ಳಲಾಗುವುದು ಎಂಬ ಲಕ್ಷ್ಮಣ್ ಸವದಿ ಅವರ ಹೇಳಿಕೆಗೆ ಅವರು ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
