(ನ್ಯೂಸ್ ಕಡಬ)newskadaba.com ಪುತ್ತೂರು, ಏ.27. ನವ ವಿವಾಹಿತೆಯೋರ್ವರು ಎರಡು ತಿಂಗಳ ಹಿಂದೆಯಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಈಕೆ ತವರು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗುಡ್ಡಕೋಡಿ ಬಾಳಪ್ಪ ಪೂಜಾರಿಯವರ ಪುತ್ರಿ ಹರ್ಷಿತಾ(28ವ.) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮದುವೆಯಾದ ಬಳಿಕ ಗಂಡನ ಮನೆಯಲ್ಲಿ ವಾಸ್ತವ್ಯವಿದ್ದ ಹರ್ಷಿತಾರವರು ತನ್ನ ತಾಯಿ ಮನೆಯ ನೆರೆಮನೆಯಲ್ಲಿ ನಡೆದ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಹೋಗಲೆಂದು ಪತಿ ಮನೆಯಿಂದ ತಾಯಿ ಮನೆಗೆ ಹೋಗಿದ್ದರು.