(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಕಾರ್ಯಕ್ಕೆ ಬೇಕಾದ ಬಸ್ಗಳ ವ್ಯವಸ್ಥೆಗೆ ಚುನಾವಣಾ ಅಧಿಕಾರಿಗಳು ಈಗಾಗಲೇ ಬುಕಿಂಗ್ ಮಾಡಿಕೊಳ್ಳುತ್ತಿದ್ದು, ಈಗಾಗಲೇ ರಾಜ್ಯಾದ್ಯಂತ 10 ಸಾವಿರ ಸರ್ಕಾರಿ ಬಸ್ಸುಗಳನ್ನು ಬುಕ್ಕಿಂಗ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಬಸ್ ಕೊರತೆ ಉಂಟಾದಲ್ಲಿ ಪ್ರಯಾಣಿಕರ ಸಂಚಾರಕ್ಕೂ ಬಿಸಿ ತಟ್ಟಲಿದೆ.
ಚುನಾವಣಾ ಅಧಿಕಾರಿಗಳು ಚುನಾವಣೆಗೆ ಬೇಕಾದ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳುತ್ತಿದ್ದು, ಎಲೆಕ್ಷನ್ ಸಿದ್ದತೆಗೆ ಬೇಕಾದ ಸಾರಿಗೆ ವ್ಯವಸ್ಥೆಗೆ ರಾಜ್ಯಾದ್ಯಂತ ಅಂದಾಜು 10 ಸಾವಿರ ಬಿಎಂಟಿಸಿ, ಕೆಎಸ್ಆರ್ಟಿಸಿ ಹಾಗೂ ಆರ್ಟಿಒ ವಾಹನಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ವರದಿ ತಿಳಿಸಿದೆ.