ಶಾ ವಿರುದ್ಧ ಕ್ರಿಮಿನಲ್‌ ಕೇಸ್‌ಗೆ ಕಾಂಗ್ರೆಸ್‌ ದೂರು    

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸುವಂತೆ ಕೋರಿ ಕಾಂಗ್ರೆಸ್‌ ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಗೆ ದೂರು ನೀಡಿದೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವಿಜಯಪುರದಲ್ಲಿ ನಡೆದ ರ್ಯಾಲಿಯಲ್ಲಿ ಕಾಂಗ್ರೆಸ್‌ ವರ್ಚಸ್ಸಿಗೆ ಧಕ್ಕೆ ತರುವ ಆರೋಪ ಮಾಡಿದ್ದಾರೆ. ಪಿಎಫ್‌ಐ ಕಾರ್ಯಕರ್ತರನ್ನು ಸಿದ್ದರಾಮಯ್ಯ ಸರ್ಕಾರ ಜೈಲಿನಿಂದ ರಿಲೀಸ್‌ ಮಾಡಿದ್ದಾಗಿ ಹೇಳಿದ್ದು, ಇದು ನಮ್ಮ ನಾಯಕರ ಘನತೆಗೆ ಧಕ್ಕೆ ತಂದಿದೆ. ಹೀಗಾಗಿ, ಶಾ ಮತ್ತು ಬಿಜೆಪಿ ನಾಯಕರ ವಿರುದ್ಧ ಐಪಿಸಿ ಸೆಕ್ಷನ್‌ನಡಿ ಕೇಸ್‌ ದಾಖಲಿಸುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

Also Read  2ನೇ ಪ್ರಯತ್ನದಲ್ಲಿ IAS ಅಧಿಕಾರಿಯಾದ ಅನುಪಮಾ ಅಂಜಲಿ

 

 

error: Content is protected !!
Scroll to Top