ಬ್ರಹ್ಮಾವರ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ)newskadaba.com  ಬ್ರಹ್ಮಾವರ, ಏ.27. ಸ್ಕೂಟರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಯಡ್ತಾಡಿ ಗ್ರಾಮದ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ ಹತ್ತಿರ ನಡೆದಿದೆ ಎಂದು ತಿಳಿದುಬಂದಿದೆ.

ಮೃತರನ್ನು ಹೈಕಾಡಿಯ ಮುಹಮ್ಮದ್ ಸಫ್ರಾನ್ ಎ.ಕೆ.(27) ಎಂದು ಗುರುತಿಸಲಾಗಿದೆ. ಸ್ಕೂಟರ್ ಸವಾರ ಭುಜಂಗ ಶೆಟ್ಟಿ (68) ಎಂಬವರು ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

Scroll to Top