ಮಗಳ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ      ➤ ಆರೋಪಿಗೆ ಜೀವಾವಧಿ ಶಿಕ್ಷೆ

(ನ್ಯೂಸ್ ಕಡಬ)newskadaba.com  ಆಂಧ್ರಪ್ರದೇಶ,  ಏ.27. ತನ್ನ ಮಗಳ ವಯಸ್ಸಿನ ಹುಡುಗಿಯ ಮೇಲೆ ಪ್ರತಿದಿನ ಲೈಂಗಿಕ ದೌರ್ಜನ್ಯ ನಡೆಸಿ ಆತ್ಮಹತ್ಯೆಗೆ ಕಾರಣನಾದ ವ್ಯಕ್ತಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಎರಡು ತಿಂಗಳಿಂದ ಪ್ರತಿದಿನ ಅವಾಚ್ಯ ಶಬ್ಧಗಳಿಂದ ಕಿರುಕುಳ ನೀಡುತ್ತಿದ್ದುದನ್ನು ತಾಳಲಾರದೇ ಅಪಾರ್ಟ್​ಮೆಂಟ್ ಮೇಲಿಂದ ಹಾರಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಿ ವಿನೋದ್ ಕುಮಾರ್ ಜೈನ್ (49)ಗೆ ಜೀವಾವಧಿ ಶಿಕ್ಷೆ ಹಾಗೂ ಮೂರು ಲಕ್ಷ ರೂಪಾಯಿ ದಂಡ ವಿಧಿಸಿ ವಿಜಯವಾಡ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶೆ ಎಸ್.ರಜಿನಿ ಬುಧವಾರ ತೀರ್ಪು ನೀಡಿದ್ದಾರೆ.

Also Read  ಪ್ರಧಾನಿ ಮೋದಿಯವರು ವಿಶ್ವದ ಅತಿ ಉದ್ದದ ನದಿ ಕ್ರೂಸರ್ ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ

 

error: Content is protected !!
Scroll to Top