ಹಿಜಾಬ್ ಧರಿಸಿದ ಮಹಿಳೆಗೆ ಬೆನ್ನಟ್ಟಿ ಕಿರುಕುಳ ನೀಡಿದ ಯುವಕರು     ➤ ದೂರು ದಾಖಲು

(ನ್ಯೂಸ್ ಕಡಬ)newskadaba.com   ಔರಂಗಾಬಾದ್‌, ಏ.27. ಹಿಜಾಬ್ ಧರಿಸಿದ ಮುಸ್ಲಿಂ ಮಹಿಳೆಗೆ ಕಿರುಕುಳ ನೀಡಿದ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಕೈ ಗೇಟ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಈ ಕುರಿತ ವಿಡಿಯೊ ವೈರಲ್ ಆಗಿದೆ.

ಮಹಿಳೆ ಸ್ವತಃ ದೂರು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬೇಗಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಯುವಕರ ಗುಂಪೊಂದು ಮಹಿಳೆಯನ್ನು ಅಡ್ಡಗಟ್ಟಿ ಮೊಬೈಲ್ ಕಸಿದುಕೊಂಡಿದ್ದಾರೆ. ಮಹಿಳೆ ತನ್ನ ಫೋನ್ ಹಿಂತಿರುಗಿಸುವಂತೆ ಮನವಿ ಮಾಡುವುದನ್ನು ಕಾಣಬಹುದು. ಯುವಕರು ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದಾರೆ.

 

Scroll to Top