ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ.! ➤ನಟಿ ತಾರಾ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ನಟಿ ಹಾಗೂ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಅವರ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸರ್ಕಾರಿ ವಾಹನ ಬಳಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇರೆಗೆ ತಾರಾ ವಿರುದ್ಧ ಪ್ರಕರಣ ದಾಖಲಾಗಿದೆ.

ಚುನಾವಣೆ ಘೋಷಣೆಯಾದ ನಂತರ ನಿಗಮದ ವ್ಯವಸ್ಥಾಪಕರಿಗೆ ಸೇರಿದ ಕಾರ್ ಅನ್ನು ತಾರಾ ಬಳಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ಪರಿಶೀಲನೆ ಬಳಿಕ ಸ್ಥಳೀಯ ಚುನಾವಣಾ ಸಂಚಾರ ವಿಚಕ್ಷಣ ದಳದ ಅಧಿಕಾರಿ ನೀಡಿದ ದೂರಿನ ಮೇರೆಗೆ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರ ಸರ್ಕಾರಿ ಕಾರ್ ಬಳಕೆ ಮಾಡುವಂತಿಲ್ಲ. ಹೀಗಿದ್ದರೂ ತಾರಾ ನಿಗಮದ ವ್ಯವಸ್ಥಾಪಕರ ಕಾರ್ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

Also Read  ಮಾರ್ಚ್ 31 ರೊಳಗೆ ಆಧಾರ್ ಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ ➤ ಆದಾಯ ತೆರಿಗೆ ಇಲಾಖೆ ಎಚ್ಚರಿಕೆ..!

 

 

 

error: Content is protected !!
Scroll to Top