ಬೆಂಗಳೂರಲ್ಲಿ ಪುಡಿರೌಡಿಗಳ ಅಟ್ಟಹಾಸ    ➤ ವ್ಯಕ್ತಿಗೆ ಚಾಕು ಇರಿತ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮಿತಿ ಮೀರುತ್ತಿದೆ. ಕಂಡ ಕಂಡಲ್ಲಿ ಜನರನ್ನು ಅಡ್ಡ ಹಾಕುವ ಕಿರಾತಕರು ಹಲ್ಲೆ ಮಾಡಿ ಉದ್ಧಟತನ ತೋರುತ್ತಿದ್ದಾರೆ.

ಇದೇ ರೀತಿ ಹವಾ ಮೈಂಟೇನ್​ ಮಾಡಲು ಅಟ್ಟಹಾಸ ಮೆರೆದಿದ್ದ ರೌಡಿಶೀಟರ್ ಕೈಗೆ ಗಿರಿನಗರ ಪೊಲೀಸ್ ಠಾಣೆಯ ಪೊಲೀಸರು ಕೈಕೋಳ ತೊಡಿಸಿದ್ದಾರೆ.

ರೌಡಿಶೀಟರ್ ನರಸಿಂಹ‌ ಅಲಿಯಾಸ್ ಕೂಸೆ, ಸಹಚರ ಕಾಂತರಾಜ್ ಬಂಧಿತರು. ಕೃತ್ಯದಲ್ಲಿ ಭಾಗಿಯಾಗಿದ್ದ ಯೋಗೇಶ್ ಸೇರಿ ಮೂವರ ವಿರುದ್ಧ ತಲೆಮರೆಸಿಕೊಂಡಿದ್ದು ಶೋಧಕಾರ್ಯ ನಡೆಸಲಾಗುತ್ತಿದೆ. ಆರೋಪಿಗಳ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Also Read  ’ವಚನ ದರ್ಶನ’ ಪುಸ್ತಕ ಬಿಡುಗಡೆ ವಿರೋಧ       ಪ್ರಗತಿಪರ ಲಿಂಗಾಯುತ ನಾಯಕರ ಪ್ರತಿಭಟನೆ    

 

 

error: Content is protected !!
Scroll to Top