ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 ಮೈಸೂರಿನಲ್ಲಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಉಪ ಅಧೀಕ್ಷಕ ತೋಟಗಾರಿಕಾ ತಜ್ಞರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 3.5 ಕೋಟಿ ರೂಪಾಯಿ ದಂಡ ವಿಧಿಸಿದೆ.
ಅಕ್ರಮವಾಗಿ ಸಂಪತ್ತು ಗಳಿಸಿದ ಆರೋಪದ ಮೇಲೆ ಆರೋಪಿ ಎಂ ಎಚ್ ತಂಗಳ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.ತಂಗಳ್ ಅವರ ಪತ್ನಿ ಮಚಮ್ತುಯಿ ಚಮರ್‌ನಾಮಿ ಅವರೂ ತಪ್ಪಿತಸ್ಥರೆಂದು ಸಾಬೀತಾಗಿದೆ. 1 ಲಕ್ಷ ದಂಡದೊಂದಿಗೆ ಮೂರು ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ.