(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸಿಇಟಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ.
ಮೇ 20 ಹಾಗೂ 21ರಂದು ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CET Exam) ನಡೆಯಲಿದ್ದು, ಪಿಯುಸಿ ಪೂರಕ ಪರೀಕ್ಷೆ ಬರೆಯಲು ಉದ್ದೇಶಿಸಿರುವವರು ಕೂಡ ಸಿಇಟಿ ಪರೀಕ್ಷೆ ಬರೆಯಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.