ಮರ್ಧಾಳ: ಅಪರಿಚಿತ ವಾಹನ ಬೈಕಿಗೆ ಢಿಕ್ಕಿ ಹೊಡೆದು ಪರಾರಿ ► ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜ.13. ಅಪರಿಚಿತ ವಾಹನವೊಂದು ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಮಿತ್ತೋಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ‌.

ಘಟನೆಯಲ್ಲಿ ಬೈಕ್ ಸವಾರ ಬೆತ್ತೋಡಿ ಸಿ ಆರ್ ಸಿ ನಿವಾಸಿ ಸತ್ಯರಾಜ್(27) ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top