(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಪ್ರಧಾನಿ ನರೇಂದ್ರ ಮೋದಿ ವಿಷದ ಹಾವು ಇದ್ದಂತೆ ಎಂದು ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಹೇಳಿಕೆಗೆ ಯೂಟರ್ನ್ ಹೊಡೆದಿದ್ದಾರೆ.ಮೋದಿ ಅಂದ್ರೆ ವಿಷದ ಹಾವು ಇದ್ದಂತೆ ವಿಷ ನೆಕ್ಕಿದವ ಸತ್ತು ಹೋಗ್ತಾನೆ ಎಂದು ಗದಗ ಕಾಂಗ್ರೆಸ್ ಸಮಾವೇಶದಲ್ಲಿ ಖರ್ಗೆ ಹೇಳುತ್ತಿದ್ದಂತೆ ರಾಜ್ಯಾದ್ಯಂತ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು.
ತಮ್ಮ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ಎಚ್ಚೆತ ಮಲ್ಲಿಕಾರ್ಜುನ ಖರ್ಗೆ, ನಾನು ಪ್ರಧಾನಿ ಮೋದಿಯವರಿಗೆ ವಿಷದ ಹಾವು ಎಂದಿಲ್ಲ, ವೈಯಕ್ತಿಕವಾಗಿ ನಾನು ಟೀಕೆ ಮಾಡಿಲ್ಲ. ಬಿಜೆಪಿ ಪಕ್ಷ ಹಾಗೂ ಅವರ ಸಿದ್ಧಾಂತವನ್ನು ಹಾವು ಇದ್ದಂತೆ ಎಂದು ಹೇಳಿದ್ದಾಗಿ ಸಮಜಾಯಿಷಿ ನೀಡಿದ್ದಾರೆ.