ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್   ➤ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗಿದೆ.!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಎದುರಾಗಿದೆ. ಹೊಸ ಸರ್ಕಾರ ರಚನೆಯಾಗುವವರೆಗೆ ಸಮಸ್ಯೆ ಮುಂದುವರೆಯಲಿದೆ. ಚುನಾವಣಾ ನೀತಿ ಸಂಹಿತೆ ಕಾರಣ ಟೆಂಡರ್ ವಿಳಂಬವಾಗಿದ್ದು, ಆಸ್ಪತ್ರೆಗಳಲ್ಲಿ ಔಷಧ ಕೊರತೆ ಕಂಡುಬಂದಿದೆ.ಚುನಾವಣೆ ನೀತಿ ಸಂಹಿತೆ ಬಿಸಿ ಸರ್ಕಾರಿ ಆಸ್ಪತ್ರೆಗಳ ಔಷಧಗಳ ಮೇಲೆ ಪರಿಣಾಮವನ್ನುಂಟು ಮಾಡಿದ್ದು, ರೋಗಿಗಳಿಗೆ ವಿತರಿಸಲು ಔಷಧಗಳ ಕೊರತೆ ಕಂಡು ಬಂದಿದೆ.

ಹೊರಗೆ ಔಷಧ ಖರೀದಿಸುವ ಪರಿಸ್ಥಿತಿ ಉಂಟಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಿಗೆ ರಿಯಾಯಿತಿ ದರದಲ್ಲಿ ಮತ್ತು ಉಚಿತವಾಗಿ ಔಷಧ ಪೂರೈಕೆ ಮಾಡುವ ಕರ್ನಾಟಕ ಡ್ರಗ್ಸ್ ಲಾಜಿಸ್ಟಿಕ್ಸ್ ಅಂಡ್ ವೇರ್ ಹೌಸಿಂಗ್ ಸೊಸೈಟಿ ಉಗ್ರಾಣಗಳಲ್ಲಿಯೂ ಔಷಧದ ಕೊರತೆ ಕಂಡುಬಂದಿದ್ದು, ಜೀವ ರಕ್ಷಕ, ಅಗತ್ಯ ಔಷಧಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗದೇ ಜನಸಾಮಾನ್ಯರು ಪರದಾಡುವಂತಾಗಿದೆ.

Also Read  ಹರಿಹರದ ಯುವತಿ-ಚಾರ್ವಾಕದ ಯುವಕ ನಾಪತ್ತೆ ➤ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲು

 

 

 

 

error: Content is protected !!
Scroll to Top