ದೆಹಲಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ     ➤ ಯುವಕನ ಬಂಧನ..!

(ನ್ಯೂಸ್ ಕಡಬ)newskadaba.com ನವದೆಹಲಿ, ಏ.28. ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶದ ಜಕೀರ್(20) ಬಂಧಿತ ಯುವಕ ಎಂದು ಗುರುತಿಸಲಾಗಿದೆ. ಬಾಂಬ್ ಬೆದರಿಕೆ ಕರೆ ಬಂದಿದ್ದು, ಬಳಿಕ ವಿಮಾನ ನಿಲ್ದಾಣದಲ್ಲಿ ಶೋಧ ನಡೆಸಲಾಗಿತ್ತಲ್ಲದೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂಬುದು ಖಚಿತವಾಗಿತ್ತು.

Also Read  ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

 

error: Content is protected !!