ಬಸ್ ನಿಲ್ಲಿಸುವ ಮೊದಲೇ ಬಾಗಿಲು ತೆರೆದು ಕೆಳಗೆ ಬಿದ್ದ ಮಹಿಳೆ ಮೃತ್ಯು.!

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಏ.28 ಕೆಎಸ್‌ಆರ್ಟಿಸಿ ಬಸ್ ಸಂಚರಿಸುವ ಸಂದರ್ಭದಲ್ಲಿ ಬಾಗಿಲು ತೆರೆದು ಆಯತಪ್ಪಿ ಕೆಳಗೆ ಬಿದ್ದ ಮಹಿಳೆ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಹೇಮಾವತಿ(32) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ.

ಬೇಲೂರಿನಿಂದ ಚಿಕ್ಕಮಗಳೂರಿನ ತಾಯಿ ಮನೆಗೆ ಬರುತ್ತಿದ್ದ ಸಂದರ್ಭದಲ್ಲಿ ಚಿಕ್ಕಮಗಳೂರಿನ ಕೋಟೆ ಸಮೀಪ ಬಸ್ ನಿಲ್ಲಿಸುವ ಮೊದಲೇ ಬಾಗಿಲು ತೆರೆದುಕೊಂಡಿದೆ.ಈ ವೇಳೆ ಬಾಗಿಲ ಪಕ್ಕದಲ್ಲಿಯೇ ಇದ್ದ ಹೇಮಾವತಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಕಳುಹಿಸುವ ವೇಳೆ ಮೃತಪಟ್ಟಿದ್ದಾರೆ.

 

 

 

Scroll to Top