(ನ್ಯೂಸ್ ಕಡಬ)newskadaba.com ಬೆಳ್ಳಾರೆ, ಏ.28. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಲ್ಲಿ ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ ಮೋನಪ್ಪ ನಾಯ್ಕ ಎಂಬವರ ಪುತ್ರ ಗೋಪಾಲಕೃಷ್ಣ ಕೆ.(34) ಎಂದು ಗುರುತಿಸಲಾಗಿದೆ.