ಬೀದರ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com. ವಿಜಯಪುರ, ಏ.29. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ.

ರಾಜ್ಯ ಪ್ರವಾಸದ ವೇಳಾಪಟ್ಟಿ ಪ್ರಕಾರ ವಿಜಯಪುರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿಯವರಿಗೆ ವಿಶೇಷ ಉಡುಗೊರೆ ನೀಡಲು ಜಿಲ್ಲಾ ಬಿಜೆಪಿ ಮುಖಂಡರು ಸಿದ್ದತೆ ಮಾಡಿಕೊಂಡಿದ್ದಾರೆ. ಪ್ರಧಾನಿ ಮೋದಿಯವರಿಗೆ ಜ್ಞಾನಯೋಗಾಶ್ರಮದ ಲಿಂಗೈಕ್ಯ ಸಿದ್ದೇಶ್ವರ ಶ್ರೀಗಳ ಭಾವಚಿತ್ರ, ಮತ್ತು ಅವರು ಬರೆದಿದ್ದ “ಅಂತಿಮ ಅಭಿವಂದನ ಪತ್ರ” ವಿಲ್​ ಪ್ರತಿಯನ್ನು ನೀಡಲಿದ್ದಾರೆ.   ಈ ಹಿಂದೆ ಮೈಸೂರಿನ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಸಿದ್ದೇಶ್ವರ ಶ್ರೀಗಳು ಪ್ರಶಂಸನೆಯ ಮಾತುಗಳನ್ನು ಆಡಿದ್ದರು.  ಹೀಗಾಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ವಿಲ್ ಪ್ರತಿ ಭಾವಚಿತ್ರ ನೀಡಲಾಗುತ್ತಿದೆ ಎಂದು ಬಿಜೆಪಿ ಪದಾಧಿಕಾರಿಗಳು ತಿಳಿಸಿದ್ದಾರೆ.

Scroll to Top