ಮೇ.10 ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲಾಗಿದೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ಮೇ.10 ರಂದು ದಿನ ನಿಗದಿಪಡಿಸಿದೆ.ಸದರಿ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ ಕಾಯ್ದೆ-1963 ಕಲಂ 3(ಎ)ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ನಿಯೋಜಕರು ಅನುವು ಮಾಡಿ ಕೊಡಬೇಕಾಗುತ್ತದೆ.

Also Read  ಇನ್ಮುಂದೆ ಭಾನುವಾರ ಸೆಲೂನ್ ಕ್ಲೋಸ್ ➤ ದ.ಕ ಹಾಗೂ ಉಡುಪಿ ಗೆ ಅನ್ವಯ

ಆದ್ದರಿಂದ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಮೇ.10 ರಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವಂತೆ ತಿಳಿಸಲಾಗಿದೆ.

 

 

error: Content is protected !!
Scroll to Top