ರಾಜ್ಯದ 8 ಜಿಲ್ಲೆಗಳಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ ಪ್ರಧಾನಿ ಮೋದಿ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ವಿಧಾನಸಭೆ ಚುನಾವಣೆ ಪ್ರಚಾರ ಭರಾಟೆ ಬಾರಿ ಜೋರಾಗಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅಧಿಕೃತ ಪ್ರಚಾರ ಆರಂಭವಾಗಲಿದೆ. ಇಂದು ಬೀದರ್ ಗೆ ಆಗಮಿಸಲಿರುವ ಪ್ರಧಾನಿ ಮೋದಿ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ನಂತರ ಬೆಳಗಾವಿ ಜಿಲ್ಲೆ ಕುಡಚಿ ಹಾಗೂ ವಿಜಯಪುರದಲ್ಲಿ ನಡೆಯುವ ಸಮಾವೇಶಗಳಲ್ಲಿ ಭಾಗವಹಿಸಲಿರುವ ಮೋದಿ ಸಂಜೆ ಬೆಂಗಳೂರಿನ ಸುಂಕದಕಟ್ಟೆ ಸಮೀಪ ರೋಡ್ ಶೋ ನಡೆಸಿ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬೆಂಗಳೂರಿನಿಂದ ಕೋಲಾರಕ್ಕೆ ತೆರಳಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಹಾಸನ ಜಿಲ್ಲೆಯ ಬೇಲೂರು, ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸಾರ್ವಜನಿಕ ಸಮಾವೇಶ, ಸಂಜೆ ಮೈಸೂರಿನಲ್ಲಿ ರೋಡ್ ಶೋ ನಡೆಸಿ ದೆಹಲಿಗೆ ವಾಪಸ್ ತೆರಳಲಿದ್ದಾರೆ.

Also Read  ಏ.24(ಇಂದು)  ನಾಮಪತ್ರ  ಹಿಂಪಡೆಯಲು ಕೊನೆ ದಿನ.!

 

 

 

error: Content is protected !!
Scroll to Top